ದೇಶದಲ್ಲಿ ಕಳೆದ 24 ಗಂಟೆಯಲ್ಲಿ 42,640 ಕೊರೊನಾ ಸೋಕು ಪ್ರಕರಣಗಳು ದೃಢಪಟ್ಟಿದ್ದು, 1167 ಮಂದಿ ಅಸುನೀಗಿದ್ದಾರೆ. ಈ ಮೂಲಕ ದೇಶದಲ್ಲಿ 91 ದಿನಗಳ ಹಿಂದಿನ ಕನಿಷ್ಠ ಪ್ರಮಾಣಕ್ಕೆ ಸೋಂಕು ಪ್ರಮಾಣ ಇಳಿಕೆಯಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2,99,77,681ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 3,89,302ಕ್ಕೆ ಜಿಗಿತ ಕಂಡಿದೆ. ಒಟ್ಟಾರೆ ಸಕ್ರಿಯ ಪ್ರಕರಣಗಳ ಸಂಖ್ಯೆ 6,62,521ಕ್ಕೆ ಇಳಿಕೆಯಾಗಿದೆ.
ಒಂದು ದಿನದಲ್ಲಿ 80,839 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 28,926,038ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಒಟ್ಟಾರೆ 28,87,66,201 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ.