ದೇಶದಲ್ಲಿ ಕೊರೊನಾ ಸೋಂಕು ಪ್ರಮಾಣದಲ್ಲಿ ಸತತ ಇಳಿಮುಖ ಕಂಡು ಬಂದಿದ್ದು, ಕಳೆದ 24 ಗಂಟೆಯಲ್ಲಿ 27,254 ಸೋಂಕು ಪ್ರಕರಣಗಳು ದೃಢಪಟ್ಟಿದ್ದರೆ, 219 ಮಂದಿ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,32,64,175ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 4,42,874ಕ್ಕೆ ಜಿಗಿತ ಕಂಡಿದೆ.
ಒಂದು ದಿನದಲ್ಲಿ 37,687 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಡಿಸ್ಚಾರ್ಜ್ ಆದವರ ಸಂಖ್ಯೆ 3,24,47,032ಕ್ಕೆ ಏರಿಕೆಯಾಗಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 3,74,269ಕ್ಕೆ ಇಳಿಕೆಯಾಗಿದೆ.