ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1.45 ಲಕ್ಷ ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, 794 ಮಂದಿ ಅಸುನೀಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ 1,45,384 ಸೋಂಕು ಪತ್ತೆಯಾಗಿದ್ದರಿಂದ ಒಟ್ಟಾರೆ ಸೋಂಕಿತರ ಸಂಖ್ಯೆ 1,32,05,926ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 1,68,436ಕ್ಕೆ ಏರಿಕೆಯಾಗಿದೆ.
ಒಂದೇ ದಿನದಲ್ಲಿ 77,567 ಮಂದಿ ಡಿಸ್ಚಾರ್ಜ್ ಆಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 1,19,90,859ಕ್ಕೆ ತಲುಪಿದೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 10,46,631ಕ್ಕೆ ಜಿಗಿತ ಕಂಡಿದೆ.