ಅತ್ಯಾಧುನಿಕ ಪರಮಾಣು ಹೊತ್ತೊಯ್ಯುವ ಸಾಮರ್ಥ್ಯದ ಅಗ್ನಿ ಕ್ಷಿಪಣಿಯ ಹೊಸ ಆವಿಷ್ಕಾರದ ಅಗ್ನಿ ಪ್ರೈಮ್ ಯಶಸ್ವಿಯಾಗಿ ಪರೀಕ್ಷಿಸಲಾಯಿತು.
ಡಿಆರ್ ಡಿಒ ಅಭಿವೃದ್ಧಿಪಡಿಸಿದ 2000 ಕಿ.ಮೀ. ದೂರ ಚಿಮ್ಮಬಲ್ಲ ಅಗ್ನಿ ಪ್ರೈಮ್ ಕ್ಷಿಪಣಿಯನ್ನು ಓಡಿಶಾದ ಕಡಲತೀರದಲ್ಲಿ ಯಶಸ್ವಿಯಾಗಿ ಪರೀಕ್ಷೆಗೊಳಪಡಿಸಲಾಯಿತು.
ಹಿಂದಿನ ಅಗ್ನಿ ಕ್ಷಿಪಣಿಗಳಿಗೆ ಹೋಲಿಸಿದರೆ ಇದು ಅತ್ಯಂತ ಹಗುರ ಮತ್ತು ಕಿರು ಗಾತ್ರ ಹೊಂದಿದ್ದು, ಅತ್ಯಾಧುನಿಕವಾಗಿ ಅಭಿವೃದ್ಧಿಪಡಿಸಲಾಗಿದೆ ಎಂದು ರಕ್ಷಣಾ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.