ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಕೋಲ್ಕತಾದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಭಾರತ ತಂಡ ಐವರು ಬೌಲರ್ ಗಳನ್ನು ಕಣಕ್ಕಿಳಿಸಿದ್ದು, ಇದರಲ್ಲಿ ಇಬ್ಬರು ಸ್ಪಿನ್ನರ್ ಗಳು ಆಡಿಸುವ ಮೂಲಕ ಅಚ್ಚರಿ ಮೂಡಿಸಿದೆ.
ಭಾರತ ತಂಡ: ರೋಹಿತ್ ಶರ್ಮ (ನಾಯಕ), ವಿರಾಟ್ ಕೊಹ್ಲಿ, ಇಶಾನ್ ಕಿಶನ್, ರಿಷಭ್ ಪಂತ್, ಸೂರ್ಯಕುಮಾರ್ ಯಾದವ್, ವೆಂಕಟೇಶ್ ಅಯ್ಯರ್, ಹರ್ಷಲ್ ಪಟೇಲ್, ಯಜುರ್ವೆಂದ್ರ ಚಾಹಲ್, ದೀಪಕ್ ಚಾಹರ್, ಭುವನೇಶ್ವರ್ ಕುಮಾರ್, ರವಿ ಬಿಶ್ನೋಯಿ.