ಭಾರತದ ಮಧ್ಯಮ ವೇಗಿ ಭುವನೇಶ್ವರ್ ಕುಮಾರ್ ಏಕದಿನ ರ್ಯಾಂಕಿಂಗ್ ನಲ್ಲಿ 11ನೇ ಸ್ಥಾನಕ್ಕೆ ಜಿಗಿತ ಕಂಡಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದ ಭುವನೇಶ್ವರ್ ಕುಮಾರ್ ಬುಧವಾರ ಬಿಡುಗಡೆ ಆದ ನೂತನ ಐಸಿಸಿ ಏಕದಿನ ರ್ಯಾಂಕಿಂಗ್ ನಲ್ಲಿ 9 ಸ್ಥಾನ ಬಡ್ತಿ ಪಡೆದು 11ನೇ ಸ್ಥಾನಕ್ಕೆ ಲಗ್ಗೆ ಹಾಕಿದ್ದಾರೆ.
ಇಂಗ್ಲೆಂಡ್ ವಿರುದ್ಧ 3 ಪಂದ್ಯಗಳಲ್ಲಿ ಭುವನೇಶ್ವರ್ 6 ವಿಕೆಟ್ ಪಡೆದಿದ್ದರು. ಅಲ್ಲದೇ ಭಾರತ ಸರಣಿ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದರು.