ನವದೆಹಲಿ: ದೇಶಾದ್ಯಂತ ಕೊರೋನಾ ಆರ್ಭಟ ದಿನೇ ದಿನೇ ಹೆಚ್ಚಾಗುತ್ತಿದೆ. ನಿನ್ನೆ ಒಂದೇ ದಿನ ದೇಶಾದ್ಯಂತ ಒಟ್ಟು 56,211 ಕೊರೋನಾ ಪ್ರಕರಣಗಳು ದಾಖಲಾಗಿವೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವಾಲಯ ಈ ಮಾಹಿತಿಯನ್ನು ಪ್ರಕಟಿಸಿದೆ.
ನಿನ್ನೆ ಒಂದೇ ದಿನ 37,028 ಸೋಂಕಿತರು ಗುಣಮುಖರಾಗಿದ್ದಾರೆ. ನಿನ್ನೆ ಒಂದೇ ದಿನ ಏಳೂವರೆ ಲಕ್ಷ ಜನರನ್ನು ಕೊರೋನಾ ಸೋಂಕು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ವರೆಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1,20,95,855 ಕ್ಕೆ ಏರಿಕೆಯಾಗಿದೆ.
ದೇಶದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 5,40,720ಕ್ಕೆ ತಲುಪಿದೆ. ದೇಶಾದ್ಯಂತ ಕೊರೋನಾ ಲಸಿಕೆಯ ಅಭಿಯಾನ ಆರಂಭವಾಗಿದ್ದು, ಒಟ್ಟು 6,11,13,354 ಜನರಿಗೆ ಕೊರೋನಾ ಲಸಿಕೆಯನ್ನು ನೀಡಲಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ ದೇಶಾದ್ಯಂತ ಕೊರೋನಾಗೆ 271 ಜನ ಮೃತರಾಗಿದ್ದು, ಈವರೆಗೆ 1,62,114 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.