ದೇಶದಲ್ಲಿ ಇದೇ ಮೊದಲ ಬಾರಿ ಒಂದೇ ದಿನದಲ್ಲಿ 4205 ಮಂದಿ ಸೋಂಕಿತರು ಮೃತಪಟ್ಟಿದ್ದು, 3.48 ಲಕ್ಷ ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಪ್ರಕಟಿಸಿದ ಮಾಹಿತಿ ಪ್ರಕಾರ ದೇಶದಲ್ಲಿ ಕೊರೊನಾ ವೈರಸ್ ಕಾಣಿಸಿಕೊಂಡ ನಂತರ ಇದೇ ಮೊದಲ ಬಾರಿ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಸೋಂಕಿತರು ಬಲಿಯಾಗಿದ್ದಾರೆ.
ಕಳೆದ 24 ಗಂಟೆಯಲ್ಲಿ 3,48,421 ಮಂದಿಗೆ ಸೋಂಕು ದೃಢಪಟ್ಟಿದ್ದರಿಂದ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2,33,40,938ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 2,54,197ಕ್ಕೆ ತಲುಪಿದೆ.
ಒಂದು ದಿನದಲ್ಲಿ 3,55,338 ಮಂದಿ ಗುಣಮುಖಿತರಾಗಿದ್ದು ದೀರ್ಘ ಸಮಯದ ನಂತರ ಸೋಂಕಿತರ ಸಂಖ್ಯೆಗಿಂತ ಗುಣಮುಖಿತರ ಸಂಖ್ಯೆಯ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಇದರಿಂದ ಒಟ್ಟಾರೆ ಗುಣಮುಖಿತರ ಸಂಖ್ಯೆ 1,93,82,642ಕ್ಕೆ ಏರಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 37,04,099ಕ್ಕೆ ಇಳಿದಿದೆ.