ದೇಶದಲ್ಲಿ ಕೊರೊನಾ ಎರಡನೇ ಅಲೆಯ ಅಬ್ಬರ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದಾಖಲೆಯ 2.95 ಲಕ್ಷ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 2,023 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಬಿಡಗುಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 1,56,16,130ಕ್ಕೆ ಜಿಗಿತ ಕಂಡರೆ, ಸಾವಿನ ಸಂಖ್ಯೆ 1,82,553ಕ್ಕೆ ತಲುಪಿದೆ.
ಕಳೆದ 24 ಗಂಟೆಯಲ್ಲಿ 2,95,041 ಸೋಂಕು ಪ್ರಕರಣಗಳು ವರದಿಯಾಗಿದ್ದು, 1,67,457 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 1,32,76,039ಕ್ಕೆ ಜಿಗಿತ ಕಂಡಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 21,57538ಕ್ಕೆ ತಲುಪಿದೆ.