ಇಂದಿರಾ ಕ್ಯಾಂಟಿನ್ ನಲ್ಲಿ ಊಟ ಮಾಡಲು ಹೋದ ರೈತನ ಮೇಲೆ ಕ್ಯಾಂಟಿನ್ ಸಿಬ್ಬಂದಿಯೇ ಹಲ್ಲೆ ಮಾಡಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರದ ಎಪಿಎಂಸಿ ಮಾರುಕಟ್ಟೆಯಲ್ಲಿರುವ ಇಂದಿರಾ ಕ್ಯಾಂಟೀನ್ ನಲ್ಲಿ ಮಂಗಳವಾರ ಮಾವಿನ ಕಾಯಿ ಮಾರಾಟ ಮಾಡಲು ಬಂದಿದ್ದ ರೈತ ದೇವರಾಜು ಹಲ್ಲೆಗೊಳಗಾದ ವ್ಯಕ್ತಿ.
ಕ್ಯಾಂಟೀನ್ ಅಡುಗೆ ಬಟ್ಟ ಶ್ರೀನಿವಾಸ್ ರೈತನ ಮೇಲೆ ಹಲ್ಲೆ ಮಾಡಿದ್ದು, ಗಾಯಗೊಂಡಿರುವ ದೇವರಾಜ್ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆ ಖಂಡಿಸಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.