ರಾಜ್ಯದಲ್ಲಿ ಕೊವಿಡ್ 2ನೇ ಅಲೆಯ ಅಬ್ಬರ ತಗ್ಗಿದ ಹಿನ್ನೆಲೆಯಲ್ಲಿ ಅಂತಾರಾಜ್ಯ ಬಸ್ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ರಾಜ್ಯ ಸರಕಾರದ ಆದೇಶದ ಹಿನ್ನೆಲೆಯಲ್ಲಿ ಮಂಗಳವಾರ ರಾಜ್ಯದಲ್ಲಿ ಕೆಎಸ್ಸಾರ್ಟಿಸಿ ಬಸ್ ಸೇವೆ ಆರಂಭಗೊಳ್ಳಲಿದೆ.
ನೆರೆಯ ಆಂಧ್ರಪ್ರದೇಶ ಮತ್ತು ತೆಲಂಗಾಣ ನಡುವೆ ಬಸ್ ಸಂಚಾರ ಪುನರಾರಂಭಗೊಳ್ಳಲಿದ್ದು, ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಮಾತ್ರ ಬಸ್ ಗಳು ಸಂಚರಿಸಲಿವೆ.