ಅಗ್ರಸ್ಥಾನದ ಮೇಲೆ ಕಣ್ಣಿಟ್ಟಿರುವ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಅಂಕಪಟ್ಟಿಯಲ್ಲಿ ಕುಸಿತ ಕಂಡಿರುವ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಬುಧವಾರ ನಡೆಯುವ ಐಪಿಎಲ್ ಪಂದ್ಯದಲ್ಲಿ ಪರಸ್ಪರ ಎದುರಾಗುತ್ತಿವೆ.
ವಿಕೆಟ್ ಕೀಪರ್ ರಿಷಭ್ ಪಂತ್ ನಾಯಕತ್ವದಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ 12 ಅಂಕ ಪಡೆದಿದ್ದರೂ ಅಷ್ಟೇ ಅಂಕ ಪಡೆದಿರುವ ಚೆನ್ನೈ ಸೂಪರ್ ಕಿಂಗ್ಸ್ ರನ್ ಸರಾಸರಿಯಲ್ಲಿ ಮೇಲುಗೈ ಸಾಧಿಸಿ ಅಗ್ರಸ್ಥಾನ ಪಡೆದಿದೆ. ಹೈದರಾಬಾದ್ ತಂಡ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ಕುಸಿದಿದ್ದು, ಸುಧಾರಣೆ ತೋರುವ ವಿಶ್ವಾಸದಲ್ಲಿದೆ.
ಡೆಲ್ಲಿ ತಂಡದ ನಾಯಕರಾಗಿ ರಿಷಭ್ ಉತ್ತಮವಾಗಿ ಮುನ್ನಡೆಸುತ್ತಿದ್ದು, ಗಾಯಗೊಂಡಿದ್ದ ಶ್ರೇಯಸ್ ಅಯ್ಯರ್ ಕೂಡ ತಂಡಕ್ಕೆ ಮರಳಿರುವುದು ತಂಡದ ಬ್ಯಾಟಿಂಗ್ ಬಲ ಹೆಚ್ಚಿಸಿದೆ. ಮತ್ತೊಂದೆಡೆ ಹೈದರಾಬಾದ್ ತಂಡ ಮರು ಸಂಘಟನೆಗೊಳ್ಳಲು ಉತ್ತಮ ಅವಕಾಶ ಲಭಿಸಿದ್ದು, ಆಫ್ಘಾನಿಸ್ತಾನದ ಆಲ್ ರೌಂಡರ್ ರಶೀದ್ ಖಾನ್ ತಂಡವನ್ನು ಸೇರಿಕೊಳ್ಳಲಿದ್ದಾರೆ.