ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಗುರುವಾರ ನಡೆಯುವ ಪಂದ್ಯದಲ್ಲಿ ಪರಸ್ಪರ ಎದುರಾಗುತ್ತಿದ್ದು, ಅಗ್ರಸ್ಥಾನಕ್ಕೆ ಲಗ್ಗೆ ಹಾಕುವ ಗುರಿ ಹೊಂದಿವೆ.
ಯುಎಇಯಲ್ಲಿ ಆರಂಭಗೊಂಡ ಎರಡನೇ ಹಂತದ ಟೂರ್ನಿಯ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಂಬೈ ಸೋಲುಂಡಿದ್ದರೆ, ಆರ್ ಸಿಬಿ ವಿರುದ್ಧ ಕೆಕೆಆರ್ ಗೆಲುವಿನ ನಗೆ ಬೀರಿತ್ತು. ಈ ಹಿನ್ನೆಲೆಯಲ್ಲಿ ಕೆಕೆಆರ್ ಬಲಿಷ್ಠ ಮುಂಬೈ ಮತ್ತೊಂದು ಸೋಲಿನ ರುಚಿ ತೋರಿಸುವುದೇ ಎಂಬ ಕುತೂಹಲ ಮೂಡಿದೆ.
ಮುಂಬೈ ಇಂಡಿಯನ್ಸ್ ಮೊದಲ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮ ಮತ್ತು ಹಾರ್ದಿಕ್ ಪಾಂಡ್ಯ ಆಡಿರಲಿಲ್ಲ. ಇದರಿಂದ ತಂಡ ಅವರ ಅನುಪಸ್ಥಿತಿಯನ್ನು ಎದುರಿಸಿತ್ತು. ಇದೀಗ ಇಬ್ಬರೂ ತಂಡವನ್ನು ಸೇರಿಕೊಳ್ಳಲಿದ್ದು, ಪೂರ್ಣ ಸಾಮರ್ಥ್ಯದೊಂದಿಗೆ ಕಣಕ್ಕಿಳಿಯುವ ಮೂಲಕ ಗೆಲುವಿನ ಆರಂಭ ಪಡೆಯುವ ವಿಶ್ವಾಸದಲ್ಲಿದೆ.