ಐಪಿಎಲ್ ನ ಬಲಿಷ್ಠ ತಂಡಗಳಾದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮಾರ್ಚ್ 26ರಂದು ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖಿ ಆಗಲಿವೆ.
ಈ ಬಾರಿ ಐಪಿಎಲ್ ನಲ್ಲಿ 10 ತಂಡಗಳು ಸೆಣಸಲಿದ್ದು, ತಲಾ 5 ತಂಡಗಳನ್ನು 2 ಗಂಪುಗಳನ್ನಾಗಿ ವಿಂಗಡಿಸಲಾಗಿದೆ. ಎರಡು ಮೈದಾನದಲ್ಲಿ ಲೀಗ್ ಹಂತದ 74 ಪಂದ್ಯಗಳು ನಡೆಯಲಿವೆ.
ಈ ಬಾರಿ ತಂಡಗಳನ್ನು 2 ಗುಂಪುಗಳನ್ನಾಗಿ ವಿಂಗಡಿಸಲಾಗಿದ್ದು ಎ ಗುಂಪಿನಲ್ಲಿ ಮುಂಬೈ ಇಂಡಿಯನ್ಸ್, ಕೋಲ್ಕತಾ ನೈಟ್ ರೈಡರ್ಸ್, ರಾಜಸ್ಥಾನ್ ರಾಯಲ್ಸ್, ಡೆಕ್ಕನ್ ಚಾರ್ಜರ್ಸ್, ಲಕ್ನೋ ತಂಡಗಳಿದ್ದರೆ, ಬಿ ಗುಂಪಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಸನ್ ರೈಸರ್ಸ್ ಹೈದರಾಬಾದ್, ಪಂಜಾಬ್ ಕಿಂಗ್ಸ್, ಗುಜರಾತ್ ಟೈಟಾನ್ಸ್.