ಸಂಘಟಿತ ಪ್ರದರ್ಶನ ನೀಡಿದ ಚೆನ್ನೈ ಸೂಪರ್ ಕಿಂಗ್ಸ್ 3 ವಿಕೆಟ್ ಗಳಿಂದ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಅಂತಿಮ ಎಸೆತದಲ್ಲಿ ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಮರಳಿ ಅಗ್ರಸ್ಥಾನಕ್ಕೆ ಲಗ್ಗೆ ಹಾಕಿದೆ.
ಅಬುಧಾಬಿಯಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಕೆಕೆಆರ್ ತಂಡ 20 ಓವರ್ ಗಳಲ್ಲಿ 6 ವಿಕೆಟ್ ಗೆ 176 ರನ್ ಗಳಿಸಿತು. ಕಠಿಣ ಗುರಿ ಬೆಂಬತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು ಗೆಲುವಿನ ನಿಟ್ಟುಸಿರು ಬಿಟ್ಟಿತು.
ಚೆನ್ನೈ ತಂಡಕ್ಕೆ ಋತುರಾಜ್ ಗಾಯಕ್ವಾಡ್ (40) ಮತ್ತು ಫಾಫ್ ಡು ಪ್ಲೆಸಿಸ್ (44) ಮೊದಲ ವಿಕೆಟ್ ಗೆ 74 ರನ್ ಜೊತೆಯಾಟದ ಮೂಲಕ ಭರ್ಜರಿ ಆರಂಭ ಒದಗಿಸಿದರು. ಆದರೆ ಇವರಿಬ್ಬರು ನಿರ್ಗಮಿಸಿದ ನಂತರ ತಂಡ ನಾಟಕೀಯ ಕುಸಿತಕ್ಕೆ ಒಳಗಾಯಿತು. ಆದರೆ ಕೊನೆಯಲ್ಲಿ ಜಡೇಜಾ ಮತ್ತು ಸ್ಯಾಮ್ ಕುರಿಯನ್ ತಂಡವನ್ನು ಗೆಲುವಿನ ದಡ ಸೇರಿಸಿದರು. ಜಡೇಜಾ ಸತತ 4 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 2 ಬೌಂಡರಿ ಸಿಡಿಸಿ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟರು.