ಪ್ರಸಕ್ತ ಸಾಲಿನ ಐಪಿಎಲ್ ಟಿ-20 ಟೂರ್ನಿಯ-2022 ಮಾರ್ಚ್ 26ರಿಂದ ಆರಂಭಗೊಳ್ಳಲಿದೆ ಎಂದು ಹೇಳಲಾಗಿದೆ.
ಪ್ರಸ್ತುತ ಭಾರತದಲ್ಲಿ ನಡೆಯಲಿರುವ ಶ್ರೀಲಂಕಾ ವಿರುದ್ಧದ ಸರಣಿ ಮುಕ್ತಾಯದ ಬೆನ್ನಲ್ಲೇ ಐಪಿಎಲ್ ಟೂರ್ನಿ ಆರಂಭಗೊಳ್ಳಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿಯಿದೆ.
ಈ ಬಾರಿಯ ಟೂರ್ನಿಯ ಮುಂಬೈ ಮತ್ತು ಪುಣೆಯಲ್ಲಿ ಮಾತ್ರ ನಡೆಯಲಿದ್ದು, ಉಳಿದ ಮೈದಾನಗಳಲ್ಲಿ ಪಂದ್ಯಗಳು ನಡೆಯುವುದಿಲ್ಲ. ಪ್ಲೇಆಫ್ ಪಂದ್ಯಗಳು ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆಯುವ ಸಾಧ್ಯತೆ ಇದೆ.