ಸಂಘಟಿತ ಪ್ರದರ್ಶನ ನೀಡಿದ ಸನ್ ರೈಸರ್ಸ್ ಹೈದರಾಬಾದ್ ತಂಡ 9 ವಿಕೆಟ್ ಗಳ ಭಾರೀ ಅಂತರದಿಂದ ಪಂಜಾಬ್ಸ್ ಕಿಂಗ್ಸ್ ತಂಡವನ್ನು ಪರಾಭವಗೊಳಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿತು.
ಚೆನ್ನೈನಲ್ಲಿ ನಡೆದ ಪಂದ್ಯದಲ್ಲಿ ಪಂಜಾಬ್ ತಂಡವನ್ನು 120 ರನ್ ಗಳಿಗೆ ಆಲೌಟ್ ಮಾಡಿದ ಹೈದರಾಬಾದ್ ತಂಡ 18.4 ಓವರ್ ಗಳಲ್ಲಿ 1 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.
ಹೈದರಾಬಾದ್ ಪರ ಆರಂಭಿಕರಾದ ಡೇವಿಡ್ ವಾರ್ನರ್ ಮತ್ತು ಜಾನ್ ಬೇರ್ ಸ್ಟೊ ಮೊದಲ ವಿಕೆಟ್ ಗೆ 73 ರನ್ ಜೊತೆಯಾಟ ನಿಭಾಯಿಸಿದರು. ವಾರ್ನರ್ 37 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ಸೇರಿದ 37 ರನ್ ಬಾರಿಸಿ ಔಟಾದರೆ, ಜಾನಿ ಬೇರ್ ಸ್ಟೊ 56 ಎಸೆತಗಳಲ್ಲಿ 3 ಬೌಂಡರಿ ಹಾಗೂ 3 ಸಿಕ್ಸರ್ ಸೇರಿದ 63 ರನ್ ಬಾರಿಸಿ ಔಟಾಗದೇ ಉಳಿಯುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು.
ಐಪಿಎಲ್ ಟೂರ್ನಿಯಲ್ಲಿ ಈ ಬಾರಿ ಹೈದರಾಬಾದ್ ಹ್ಯಾಟ್ರಿಕ್ ಸೋಲಿನ ನಂತರ ಮೊದಲ ಗೆಲುವು ದಾಖಲಿಸಿದರೆ, ಪಂಜಾಬ್ ಮೊದಲ ಪಂದ್ಯದ ಗೆಲುವಿನ ನಂತರ ಹ್ಯಾಟ್ರಿಕ್ ಸೋಲುಂಡಂತಾಗಿದೆ.