ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕ ಬ್ಯಾಟ್ಸ್ ಮನ್ ದೇವದತ್ ಪಡಿಕಲ್ ಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಐಪಿಎಲ್ ಟೂರ್ನಿ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ದೇವದತ್ ಪಡಿಕಲ್ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಐಪಿಎಲ್ ನ ಮೂರನೇ ಆಟಗಾರನಿಗೆ ಸೋಂಕು ತಗುಲಿದಂತಾಗಿದೆ.
ದೇಶೀಯ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡಿ ದಾಖಲೆ ಬರೆದಿದ್ದ ಪಡಿಕಲ್ ಪ್ರಸ್ತುತ ಕ್ವಾರಂಟೈನ್ ಗೆ ಒಳಗಾಗಿದ್ದು, ಐಪಿಎಲ್ ನ ಆರಂಭಿಕ ಎರಡು ಪಂದ್ಯಗಳಿಂದ ಹೊರಗುಳಿಯುವ ಸಾಧ್ಯತೆ ಇದೆ.
ಏಪ್ರಿಲ್ 9ರಂದು ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಆರ್ ಸಿಬಿ ಎದುರಿಸಲಿದೆ.