ನವದೆಹಲಿ : ಸಿಬಿಐ ನಿರ್ದೇಶಕರಾಗಿ ಮಹಾರಾಷ್ಟ್ರದ ಹಿರಿಯ ಐಪಿಎಸ್ ಅಧಿಕಾರಿ ಸುಬೋಧ್ ಕುಮಾರ್ ಜೈಸ್ವಾಲ್ ಅವರನ್ನು ನೇಮಕ ಮಾಡಲಾಗಿದೆ
ಪ್ರಸ್ತುತ ಸುಭೋದ್ ಕುಮಾರ್ ಜೈಸ್ವಾಲ್ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CSIF) ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದರು. 1985ನೇ ಬ್ಯಾಚ್ನ ಮಹಾರಾಷ್ಟ್ರ ಕೇಡರ್ನ ಐಪಿಎಸ್ ಅಧಿಕಾರಿಯಾಗಿರುವ ಇವರು ಇದೀಗ ಸಿಬಿಐ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ.
ನಿನ್ನೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಎನ್. ವಿ. ರಮಣ, ಲೋಕಸಭೆ ಪ್ರತಿಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನೊಳಗೊಂಡ ಸಮಿತಿ ಈ ಮೂವರ ಹೆಸರನ್ನು ಆಯ್ಕೆ ಮಾಡಿತ್ತು.
ಫೆಬ್ರವರಿ ತಿಂಗಳಲ್ಲಿ ರಿಷಿ ಕುಮಾರ್ ಶುಕ್ಲಾ ಸಿಬಿಐ ನಿರ್ದೆಶಕ ಸ್ಥಾನದಿಂದ ನಿವೃತ್ತಿಯಾಗಿದ್ದರು. ಅದರ ಬಳಿಕ ಸಿಬಿಐ ಹೆಚ್ಚುವರಿ ನಿರ್ದೆಶಕ ಪ್ರವೀಣ್ ಸಿನ್ಹಾ ಸಿಬಿಐನ ಕಾರ್ಯಕಾರಿ ನಿರ್ದೇಶಕರಾಗಿ ನೇಮಕಗೊಂಡಿದ್ದರು. ಇದೀಗ ಸುಬೋಧ್ ಕುಮಾರ್ ಜೈಸ್ವಾಲ್ ಮುಂದಿನ 2 ವರ್ಷಗಳ ಅವಧಿಗೆ ಸಿಬಿಐ ನಿರ್ದೇಶಕರಾಗಿರಲಿದ್ದಾರೆ