ಸಿಲಿಕಾನ್ ಸಿಟಿಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ 70ಕ್ಕೂ ಹೆಚ್ಚು ಕಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬೃಹತ್ ದಾಳಿ ನಡೆಸಿದ್ದಾರೆ.
![](https://rajnewskannada.in/wp-content/uploads/2022/06/image-1-1024x683.png)
ಬೆಳ್ಳಂ ಬೆಳಗ್ಗೆ ಉದ್ಯಮಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. 600ಕ್ಕೂ ಹೆಚ್ಚು ಅಧಿಕಾರಿಗಳ ತಂಡದಿಂದ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಲಾಗಿದ್ದು, ಸರ್ಚ್ ವಾರೆಂಟ್ ತಂದು ಮನೆ ಹಾಗೂ ಕಚೇರಿಗಳನ್ನು ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
![](https://rajnewskannada.in/wp-content/uploads/2022/06/image-2.png)
ಆದಾಯ ಮರೆಮಾಚಿ ಐಟಿ ರಿಟರ್ನ್ಸ್ ಸಲ್ಲಿಕೆ ಹಿನ್ನೆಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಐಟಿ ರಿಟರ್ನ್ಸ್ ಸಲ್ಲಿಕೆಗಿಂತ ಹೆಚ್ಚಿನ ಆದಾಯ ಹೊಂದಿರೋದನ್ನ ಪತ್ತೆ ಮಾಡಿ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಗೋವಾ – ಕರ್ನಾಟಕ ಅಧಿಕಾರಿಗಳ ತಂಡ ದಾಳಿಯಲ್ಲಿ ಭಾಗಿಯಾಗಿದ್ದು, ಲೆಕ್ಕಪತ್ರಗಳ ಶೋಧನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : – ಖ್ಯಾತ ಗಾಯಕ ಕೃಷ್ಣಕುಮಾರ್ ಕುನ್ನತ್ ವಿಧಿವಶ