ಸ್ಥಳದಲ್ಲಿ ದೇವರು ಇರುವುದು ನಿಜ – ಕೇರಳದ ದೈವಜ್ಞರಿಂದ ಉತ್ತರ

ಮಳಲಿ ಮಸೀದಿ ನವೀಕರಣದ ವೇಳೆ ದೇವಾಲಯದ ಮಾದರಿ ರಚನೆ ಪತ್ತೆಯಾದ ಹಿನ್ನೆಲೆಯಲ್ಲಿ ದೈವ ಸಾನಿಧ್ಯ ದೃಢೀಕರಣಕ್ಕಾಗಿ ಇಂದು ಬೆಳಗ್ಗೆ 8 ಗಂಟೆಯಿಂದ ರಾಮಾಂಜನೇಯ ಭಜನಾ ಮಂದಿರದಲ್ಲಿ ತಾಂಬೂಲ ಪ್ರಶ್ನೆ ನಡೆಯುತ್ತಿದೆ.

ಈ ವೇಳೆ ಕೇರಳ ದೈವಜ್ಞರು ಸ್ಥಳದಲ್ಲಿ ಈ ಹಿಂದೆ ದೇವದಾಲಯವಿತ್ತು, ವಿವಾದದಿಂದ ದೇವಾಲಯ ನಾಶಪಡಿಸಲಾಗಿದೆ, ದೇವಸ್ಥಾನ ಮರುಸ್ಥಾಪಿಸಬೇಕೆಂದು ಹೇಳಿದ್ದಾರೆ. ತಾಂಬೂಲ ಪ್ರಶ್ನೆ ವೇಳೆ ಕೇರಳದ ಪ್ರಖ್ಯಾತ ಜ್ಯೋತಿಷಿ ದೈವಜ್ಞ ಗೋಪಾಲಕೃಷ್ಣ ಪಣಿಕ್ಕರ್ ಅವರು ಉತ್ತರ ನೀಡಿದ್ದು ಮಳಲಿಯ ಮಸೀದಿ ಸ್ಥಳದಲ್ಲಿ ದೇವರು ಇರುವುದು ನಿಜ ಎಂದು ಹೇಳಿದ್ದಾರೆ. ಇದನ್ನೂ ಓದಿ :- ಮಂಗಳೂರಿನ ಮಳಲಿಯಲ್ಲಿರುವುದು ದರ್ಗಾವೋ, ದೇಗುಲವೋ?

ಸಾಮಾನ್ಯ ತಾಂಬೂಲ ಪ್ರಶ್ನೆಯಲ್ಲಿ ಪೂರ್ಣವಾದ ಚೈತನ್ಯವಿದೆ. ನಾವು ಪ್ರಾರ್ಥಿಸಿ ಇಟ್ಟ ರಾಶಿಯಲ್ಲಿ ದೇವರು ಇರುವುದು ನಿಜ. ಪೂರ್ವದಲ್ಲಿ ಇದೊಂದು ಮಠದ ರೂಪದಲ್ಲಿತ್ತು. ಇದು ದೈವ ಸಾನ್ನಿಧ್ಯ ಇದ್ದಂತಹ ಸ್ಥಳ. ವಿವಾದದಿಂದಾಗಿ ದೇವಾಲಯ ನಾಶಪಡಿಸಿ, ಮಸೀದಿ ಕಟ್ಟಲಾಗಿದೆ. ದೇವಾಲಯವನ್ನು ಮರುಸ್ಥಾಪಿಸಬೇಕಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ :- ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ ಪ್ರಕರಣ – ವಿಚಾರಣೆ ಮೇ 26ಕ್ಕೆ ಮುಂದೂಡಿದ ಜಿಲ್ಲಾ ಕೋರ್ಟ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!