ಕಾಂಗ್ರೆಸ್ ನಿಂದ ರಾಜ್ಯಸಭಾ ಮೊದಲನೇ ಅಭ್ಯರ್ಥಿಯಾಗಿ ಜೈರಾಂ ರಮೇಶ್ (JAIRAM RAMESH) ನಾಮಪತ್ರ ಸಲ್ಲಿಸಿದ್ದಾರೆ.
ಎರಡನೇ ಅಭ್ಯರ್ಥಿಯಾಗಿ ಮನ್ಸೂರ್ ಅಲಿಖಾನ್ (Mansoor ali khan) ನಾಮಪತ್ರ ಸಲ್ಲಿಸಿದ್ದಾರೆ.
ಚುನಾವಣಾಧಿಕಾರಿ ಎಂ ಕೆ ವಿಶಾಲಾಕ್ಷಿಗೆ ಇಬ್ಬರು ನಾಯಕರು ನಾಮಪತ್ರ ಸಲ್ಲಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ( dk shivkumar ) , ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ,ಯು ಟಿ ಖಾದರ್,ಜಮೀರ್ ಅಹಮದ್ ಖಾನ್ ಉಪಸ್ಥಿತರಿದ್ದರು.
ಒಟ್ಟು ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಸದ್ಯ ಕಾಂಗ್ರೆಸ್ ಬಳಿ 70 +1 ಮತಗಳು ಇವೆ. ಈ ಪೈಕಿ ಮೊದಲ ಅಭ್ಯರ್ಥಿಗೆ 45 ಮತಗಳ ಅಗತ್ಯ ಇದೆ. ಉಳಿದ ಮತಗಳನ್ನು ಎರಡನೇ ಅಭ್ಯರ್ಥಿಗೆ ಹಾಕಿದರೂ ಗೆಲುವು ಕಷ್ಟ. ಆದ್ರೂ ಕಾಂಗ್ರೆಸ್ ಎರಡನೇ ಅಭ್ಯರ್ಥಿಯನ್ನ ಕಣಕ್ಕಿಳಿಸಿದೆ. ಇದನ್ನೂ ಓದಿ : –ರಾಜ್ಯಸಭೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆ – ಡಿಕೆಶಿ ವಿರುದ್ಧ ಮುದ್ದಹನುಮೇಗೌಡ ಅಸಮಾಧಾನ
ಮನ್ಸೂರ್ ಅಲಿ ಖಾನ್ ಹಿರಿಯ ಕಾಂಗ್ರೆಸ್ ಮುಖಂಡ ರೆಹಮಾನ್ ಖಾನ್ (Rehamankhan) ಪುತ್ರರಾಗಿದ್ದಾರೆ. ಸಿಎಲ್ಪಿ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮನ್ಸೂರ್ ಅಲಿ ಖಾನ್ ಗೆ ಬಿ ಫಾರಂ ಕೊಡಲಾಗಿದೆ.
ಜೆಡಿಎಸ್ (JDS) ಕುಪೇಂದ್ರ ರೆಡ್ಡಿಯನ್ನ ಕಣಕ್ಕಿಳಿಸಿದ್ದು ಈಗ ಬಿಜೆಪಿಯಿಂದ ಬೆಂಬಲ ಕೋರುವ ಅನಿವಾರ್ಯತೆ ಎದುರಾಗಿದೆ. ಒಂದು ವೇಳೆ ಬಿಜೆಪಿ ಬೆಂಬಲವನ್ನ ಪಡೆದರೆ ಜೆಡಿಎಸ್ ಗೆ ಕೋಮುವಾದಿ ಪಟ್ಟ ಕಟ್ಟಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್ ಮಾಡುತ್ತಿದೆ. ಇದನ್ನೂ ಓದಿ : – Rajya Sabha Elections- ಕಾಂಗ್ರೆಸ್ ನಿಂದ 2ನೇ ಅಭ್ಯರ್ಥಿಯಾಗಿ ಮನ್ಸೂರ್ ಅಲಿ ಖಾನ್ ಕಣಕ್ಕೆ!