ರಾಜ್ಯಸಭೆ ಚುನಾವಣೆಯಲ್ಲಿ (Rajyasabha election) ಅಡ್ಡ ಮತದಾನ ಹಿನ್ನೆಲೆಯಲ್ಲಿ ಜೆಡಿಎಸ್ (JDS) ನಿಂದ ಇಬ್ಬರು ಶಾಸಕರನ್ನ ಉಚ್ಛಾಟನೆ ಮಾಡಲಾಗಿದೆ. ಗುಬ್ಬಿ ಶಾಸಕ ಶ್ರೀನಿವಾಸ್ (Gubbi srinivas) ಹಾಗೂ ಶ್ರೀನಿವಾಸ್ ಗೌಡ (Srnivas gowda) ಅವರನ್ನ ಪಕ್ಷದಿಂದ ಉಚ್ಛಾಟಿಸಲಾಗಿದೆ.
ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್ ಹಾಗೂ ಕೋಲಾರದ ಶಾಸಕ ಶ್ರೀನಿವಾಸ್ ಗೌಡ(ವಾಸು) ಅವರನ್ನ ಪಕ್ಷ ಉಚ್ಛಾಟನೆ ಮಾಡಿದೆ.
ಇಂದು ನಡೆದ ಕೋರ್ ಕಮಿಟಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೋರ್ ಕಮಿಟಿ ಅಧ್ಯಕ್ಷ ಬಂಡೆಪ್ಪ ಖಾಶೆಂಪೂರ್ (Bandeppa shakempur) ಮಾಧ್ಯಮಗಳಿಗೆ ತಿಳಿಸಿದರು. ಹಾಗೆಯೇ ಪಕ್ಷಾಂತರ ನಿಷೇಧ ಕಾಯ್ದೆ ಅಡಿ ಇಬ್ಬರೂ ಶಾಸಕರನ್ನು ವಿಧಾನಸಭೆ ಸದಸ್ಯತ್ವದಿಂದ ಅನರ್ಹಗೊಳಿಸಲು ತಕ್ಷಣವೇ ವಿಧಾನಸಭಾಧ್ಯಕ್ಷರಿಗೆ ದೂರು ನೀಡಲು ಕೂಡ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಇದನ್ನೂ ಓದಿ : – ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶುಲ್ಕ ಹೆಚ್ಚಳದ ಶಾಕ್ – ಮುಂದಿನ ವರ್ಷದಿಂದ ಏಕರೂಪದ CET ನಡೆಸಲು ಚಿಂತನೆ
ನಾಳೆ ಅಥವಾ ನಾಡಿದ್ದರ ಒಳಗಾಗಿ ಸ್ಪೀಕರ್ ಅವರಿಗೆ ದೂರು ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದರು.ರಾಜ್ಯಸಭಾ ಚುನಾವಣೆಯಲ್ಲಿ ಗುಬ್ಬಿ ಶ್ರೀನಿವಾಸ್ ಖಾಲಿ ಪೇಪರ್ ಅನ್ನು ಬ್ಯಾಲೆಟ್ ಬಾಕ್ಸ್ಗೆ ಹಾಕಿ ಸಂಚಲನ ಮೂಡಿಸಿದ್ದರು. ಇದಕ್ಕೂ ಮೊದಲು ಜೆಡಿಎಸ್ನ ಶ್ರೀನಿವಾಸ್ ಗೌಡ ಅಡ್ಡ ಮತದಾನ ಮಾಡಿದ್ದರು. ಇದನ್ನೂ ಓದಿ : – Maharashtra crisis – ಈಗಲೇ ರಾಜೀನಾಮೆ ನೀಡಲು ಸಿದ್ಧ ಎಂದ ಉದ್ಧವ್ ಠಾಕ್ರೆ