ತುಮಕೂರಿ (Tumakuru) ನ ಮಧುಗಿರಿ ಕ್ಷೇತ್ರಕ್ಕೆ ಜೆಡಿಎಸ್ (JDS) ಪಂಚರತ್ನ ರಥಯಾತ್ರೆ (Pancharatna ratha yatre) ತಲುಪಿದೆ. ಮಧುಗಿರಿ ಪಟ್ಟಣದ ದಂಡಿನ ಮಾರಮ್ಮ ದೇವಸ್ಥಾನದ ಬಳಿ ಕುಮಾರಸ್ವಾಮಿ ಅವರನ್ನ ಅದ್ಧೂರಿಯಾಗಿ ಸ್ವಾಗತಿಸಲಾಗಿದೆ. ದಂಡಿನ ಮಾರಮ್ಮ ದೇವರಿಗೆ ಪೂಜೆ ಸಲ್ಲಿಸಿ ಮಾಜಿ ಸಿಎಂ ಕುಮಾರಸ್ವಾಮಿ ಅಧಿಕೃತ ಪ್ರಚಾರ ಆರಂಭಿಸಿದ್ದಾರೆ.
ದಂಡಿನ ಮಾರಮ್ಮ ದೇವಸ್ಥಾನದ ಬಳಿ ಬೃಹತ್ ಸಂಖ್ಯೆಯಲ್ಲಿ ಜನ ಸೇರಿದ್ದಾರೆ. ಟಿಕೆಟ್ ಗಾಗಿ ಇಬ್ಬರು ನಾಯಕರ ನಡುವೆ ಪೈಪೋಟಿ ಶುರುವಾಗಿದೆ. ಹಾಲಿ ಶಾಸಕ ವೀರಭದ್ರಯ್ಯ ಹಾಗೂ ಮುಖಂಡ ಎಲ್.ಸಿ ನಾಗರಾಜು ನಡುವೆ ತೀವ್ರ ಪೈಪೋಟಿ ಶುರುವಾಗಿದೆ. ಎಲ್ .ಸಿ ನಾಗರಾಜು ಪರ ಬೆಂಬಲಿಗರು ಘೋಷಣೆ ಕೂಗುತ್ತಿದ್ದಾರೆ. ಇನ್ನೊಂದು ಕಡೆ ಶಾಸಕ ವೀರಭದ್ರಯ್ಯ ಪರ ಬೆಂಬಲಿಗರು ಘೋಷಣೆ ಕೂಗುತ್ತಿದ್ದಾರೆ. ಉಭಯ ಮುಖಂಡರು ತಮ್ಮ ತಮ್ಮ ಶಕ್ತಿಪ್ರದರ್ಶನ ಮಾಡುತ್ತಿದ್ದಾರೆ.
ಇದನ್ನೂ ಓದಿ : – ‘ಕಾಂತಾರʼ ಪರ ತೀರ್ಪು ನೀಡಿದ್ದ ಆದೇಶಕ್ಕೆ ಕೇರಳ ಹೈಕೋರ್ಟ್ ತಡೆ