ಭಾರತ ವಿರುದ್ಧದ ಮೂರನೇ ಟೆಸ್ಟ್ ಪಂದ್ಯವನ್ನು ಇನಿಂಗ್ಸ್ ಹಾಗೂ 76 ರನ್ ಗಳಿಂದ ಗೆಲುವು ಸಾಧಿಸಿದ ಬೆನ್ನಲ್ಲೇ ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್ ನಾಯಕನಾಗಿ ಮತ್ತೊಂದು ದಾಖಲೆ ಬರೆದಿದ್ದಾರೆ.
ಜೋ ರೂಟ್ ಇದೀಗ ಮಾಜಿ ನಾಯಕ ಮೈಕಲ್ ವಾನ್ ನಂತರ ಅತ್ಯಂತ ಯಶಸ್ವಿ ಟೆಸ್ಟ್ ನಾಯಕ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಜೋ ರೂಟ್ ನಾಯಕತ್ವದಲ್ಲಿ ಇಂಗ್ಲೆಂಡ್ 27 ಪಂದ್ಯಗಳನ್ನು ಗೆದ್ದು ದಾಖಲೆ ಬರೆದರೆ, ವಾನ್ 26 ಪಂದ್ಯಗಳಲ್ಲಿ ತಂಡಕ್ಕೆ ಗೆಲುವು ತಂದುಕೊಟ್ಟಿದ್ದರು.
2017ರಲ್ಲಿ ಅಲಿಸ್ಟರ್ ಕುಕ್ ನಂತರ ಜೋ ರೂಟ್ ಇಂಗ್ಲೆಂಡ್ ತಂಡವನ್ನು ಮುನ್ನಡೆಸುವ ಜವಾಬ್ದಾರಿ ಹೊತ್ತಿದ್ದರು. ಅಲ್ಲದೇ ರೂಟ್ ಇದುವರೆಗೆ 23 ಟೆಸ್ಟ್ ಶತಕವನ್ನು ಬಾರಿಸಿದ ದಾಖಲೆಯನ್ನೂ ಹೊಂದಿದ್ದಾರೆ.