ರಾಷ್ಟ್ರಪತಿ ಚುನಾವಣೆಗೆ ಜಂಟಿ ಕಾರ್ಯತಂತ್ರ –ಜೂನ್ 15ರಂದು ದೆಹಲಿಯಲ್ಲಿ ನಡೆಯುವ ಸಭೆಗೆ 22 ಪ್ರತಿಪಕ್ಷ ನಾಯಕರ ಸಭೆಗೆ ಆಹ್ವಾನ ನೀಡಿದ ಮಮತಾ ಬ್ಯಾನರ್ಜಿ 

ಮುಂಬರುವ ರಾಷ್ಟ್ರಪತಿ ಚುನಾವಣೆ (Presidential election)ಗೆ ಜಂಟಿ ಕಾರ್ಯತಂತ್ರ  ಸಿದ್ಧಪಡಿಸಲು ಜೂನ್ 15 ರಂದು ದೆಹಲಿಯಲ್ಲಿ ಕರೆದಿರುವ ಸಭೆಗೆ ಹಾಜರಾಗುವಂತೆ ಪಶ್ಚಿಮ ಬಂಗಾಳ (West bengal)ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamatha banerji) 22 ಪ್ರತಿಪಕ್ಷ ನಾಯಕರಿಗೆ ಪತ್ರ ಬರೆದಿದ್ದಾರೆ.

ರಾಷ್ಟ್ರಪತಿ ಚುನಾವಣೆ ಸಂಬಂಧ ರಾಷ್ಟ್ರ ರಾಜಧಾನಿಯಲ್ಲಿ ನಡೆಯುವ ಜಂಟಿ ಸಭೆಯಲ್ಲಿ ಭಾಗವಹಿಸುವಂತೆ ವಿರೋಧ ಪಕ್ಷಗಳ ಮುಖ್ಯಮಂತ್ರಿಗಳು ಮತ್ತು ನಾಯಕರಿಗೆ ಮಮತಾ ಬ್ಯಾನರ್ಜಿ ಮನವಿ ಮಾಡಿದ್ದಾರೆ . ಟಿಎಂಸಿ (TMC) ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದೆ.ಸೋನಿಯಾ ಗಾಂಧಿ (Sonia Gandhi), ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ (Uddav thackery), ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Aravind Kejrival), ಕೇರಳ ಸಿಎಂ ಪಿಣರಾಯಿ ವಿಜಯನ್, ಒಡಿಶಾ ಸಿಎಂ ನವೀನ್ ಪಟ್ನಾಯಕ್, ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್, ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ (Chandrashkekar rao) , ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಮತ್ತು ಪಂಜಾಬ್ ಸಿಎಂ ಭಗವಂತ್ ಮಾನ್ ಸೇರಿದಂತೆ 22 ಪ್ರತಿಪಕ್ಷ ನಾಯಕರಿಗೆ ಪತ್ರ ಬರೆಯಲಾಗಿದೆ. ಇದನ್ನೂ ಓದಿ : – ಅಕ್ರಮ ವಲಸಿಗರಿಗೆ ಆಧಾರ್ ಕಾರ್ಡ್ ಪೂರೈಸುತ್ತಿದ್ದ ಜಾಲವನ್ನು ಪತ್ತೆ ಹಚ್ಚಿದ ಬೆಂಗಳೂರು ಗ್ರಾಮಾಂತರ ಪೊಲೀಸರು – ಗೃಹ ಸಚಿವರಿಂದ ಅಭಿನಂದನೆ

“ನಮ್ಮ ಗೌರವಾನ್ವಿತ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರು ರಾಷ್ಟ್ರಪತಿ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮದ ಬಗ್ಗೆ ಚರ್ಚಿಸಲು ಎಲ್ಲಾ ಪ್ರಗತಿಪರ ವಿರೋಧ ಪಕ್ಷಗಳಿಗೆ ಜೂನ್ 15  2022 ರಂದು ನವದೆಹಲಿಯ (Newdelhi) ಕಾನ್ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ಮಧ್ಯಾಹ್ನ 3 ಗಂಟೆಗೆ ಸಭೆ ಕರೆ ಕರೆದಿದ್ದಾರೆ” ಎಂದು ತೃಣಮೂಲ ಕಾಂಗ್ರೆಸ್  (Congress) ಸ್ಪಷ್ಟಪಡಿಸಿದೆ. ಇದನ್ನೂ ಓದಿ : – ನಮ್ಮಲ್ಲಿ ಯಾವುದೇ ಬಣನೂ ಇಲ್ಲ ಬಾಣನೂ ಇಲ್ಲ – ಲಕ್ಷ್ಮಣ್ ಸವದಿ ಆಕ್ರೋಶ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!