ಭಾರತ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಸೋತು ಸರಣಿ ಸೋಲಿನ ಭೀತಿಗೆ ಸಿಲುಕಿರುವ ಇಂಗ್ಲೆಂಡ್ ತಂಡ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕೆ ತಂಡವನ್ನು ಪ್ರಕಟಿಸಿದ್ದು ಎರಡು ಬದಲಾವಣೆ ಮಾಡಲಾಗಿದೆ.
ಮ್ಯಾಂಚೆಸ್ಟರ್ ನ ಓಲ್ಡ್ ಟ್ರಫರ್ಡ್ ಮೈದಾನದಲ್ಲಿ ಸೆಪ್ಟೆಂಬರ್ 10ರಿಂದ ನಡೆಯುವ ಅಂತಿಮ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ಮಂಗಳವಾರ 16 ಆಟಗಾರರ ಇಂಗ್ಲೆಂಡ್ ತಂಡವನ್ನು ಪ್ರಕಟಿಸಿದೆ.
ಇಂಗ್ಲೆಂಡ್ ತಂಡದಲ್ಲಿ ವಿಕೆಟ್ ಕೀಪರ್ ಜೋಸ್ ಬಟ್ಲರ್ ಮತ್ತುಆಫ್ ಸ್ಪಿನ್ನರ್ ಜಾಕ್ ಲೀಚ್ ಅವರನ್ನು ತಂಡಕ್ಕೆ ಸೇರಿಸಲಾಗಿದ್ದು, ಸ್ಪಿನ್ ಆಲ್ ರೌಂಡರ್ ಸ್ಯಾಮ್ ಬಿಲ್ಲಿಂಗ್ಸ್ ಅವರನ್ನು ತಂಡದಿಂದ ಬಿಡುಗಡೆ ಮಾಡಲಾಗಿದೆ.
ಭಾರತ ವಿರುದ್ಧದ ನಾಲ್ಕು ಪಂದ್ಯಗಳಲ್ಲಿ ಇಂಗ್ಲೆಂಡ್ 1-2ರಿಂದ ಹಿನ್ನಡೆ ಅನುಭವಿಸಿದೆ. ಸೋಮವಾರ ಮುಕ್ತಾಯಗೊಂಡ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ 158 ರನ್ ಗಳಿಂದ ಸೋಲುಂಡಿದ್ದು ತಂಡದ ಮೇಲೆ ಒತ್ತಡ ಹೆಚ್ಚಿಸುವಂತೆ ಮಾಡಿದೆ.
ಇಂಗ್ಲೆಂಡ್ ತಂಡ:
ರೋರಿ ಬರ್ನ್ಸ್, ಹಸೀಬ್ ಹಮೀದ್, ಮೊಯಿನ್ ಅಲಿ, ಜಾನಿ ಬೇರ್ ಸ್ಟೊ, ಜೋ ರೂಟ್ (ನಾಯಕ), ಜೋಸ್ ಬಟ್ಲರ್, ಡ್ಯಾನ್ ಲಾರೆನ್ಸ್, ಓಲಿ ರಾಬಿನ್ಸನ್, ಸ್ಯಾಮ್ ಕುರಿಯನ್, ಮಾರ್ಕ್ ವುಡ್, ಜೇಮ್ಸ್ ಆಂಡರ್ಸನ್, ಜ್ಯಾಕ್ ಲೀಚ್, ಓಲಿ ಪೋಪ್, ಡೇವಿಡ್ ಮಲಾನ್, ಕ್ರೇಗ್ ಓವರ್ಟನ್.