ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಾಗಿರುವ ಬಿವಿ ನಾಗರತ್ನ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಆಗಿ ನೇಮಕಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಈ ಮೂಲಕ ದೇಶದ ಮೊದಲ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಆಗಿ ಎಂಬ ಗೌರವಕ್ಕೆ ಪಾತ್ರರಾಗುವ ಅವಕಾಶ ಪಡೆಯಲಿದ್ದಾರೆ.
ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಸುಪ್ರೀಂಕೋರ್ಟ್ ಕೊಲೆಜಿಯಂ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಆಗಿರುವ ಬಿವಿ ನಾಗರತ್ನ ಅವರನ್ನು ಸೇರಿದಂತೆ 9 ನ್ಯಾಯಮೂರ್ತಿಗಳ ಹೆಸರನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಸ್ಥಾನಕ್ಕೆ ಶಿಫಾರಸು ಮಾಡಿದೆ. ಒಂದು ವೇಳೆ ಈ ಶಿಫಾರಸಿಗೆ ಒಪ್ಪಿಗೆ ದೊರೆತದೆ 2027ರ ವೇಳೆಗೆ ನಾಗರತ್ನ ಅವರು ಮುಖ್ಯನ್ಯಾಯಮೂರ್ತಿ ಸ್ಥಾನ ಅಲಂಕರಿಸಲಿದ್ದಾರೆ.