ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಬಗ್ಗವಳ್ಳಿ ಗ್ರಾಮದ ಯೋಧ ಬಿ.ಎಸ್.ರಾಜು ಇಂದು ಭಾರತೀಯ ಸೇನೆಯ ಉಪ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಮನೋಜ್ ನರವಣೆಯವರು ಸೇನೆಯ ಮುಖ್ಯಸ್ಥರಾಗಿ ನೇಮಕವಾದ ಬೆನ್ನಲ್ಲೇ ಅವರಿಂದ ತೆರವಾದ ಸ್ಥಾನವನ್ನು ಕನ್ನಡಿಗ ಬಿ.ಎಸ್.ರಾಜು ತುಂಬುತ್ತಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ರಾಜು ಅವರ ಸ್ವಗ್ರಾಮ ಅಜ್ಜಂಪುರ ತಾಲೂಕಿನ ಬಗ್ಗವಳ್ಳಿಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಇದನ್ನೂ ಓದಿ :- ಪಿಎಸ್ಐ (PSI) ನೇಮಕಾತಿಯಲ್ಲಿ ಅಕ್ರಮ – ಬೆಂಗಳೂರಿನಲ್ಲಿ 12 ಅಭ್ಯರ್ಥಿಗಳು ಅರೆಸ್ಟ್
ಬಿ.ಎಸ್.ರಾಜು ಪ್ರಪಂಚದ ಮೂರನೇ ಶಕ್ತಿಯುತ ಸೇನೆಯಾಗಿರುವ ಭಾರತೀಯ ಸೇನೆಯ ಉಪ ಮುಖ್ಯಸ್ಥರಾಗುತ್ತಿರುವುದಕ್ಕೆ ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿ ಸೇರಿದಂತೆ ಎಲ್ಲರಿಂದ, ಎಲ್ಲೆಡೆಯಿಂದ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.
ತಮ್ಮೂರಿನ ಹುಡುಗ ಸೇನೆಯ ಎರಡನೇ ಅತ್ಯುನ್ನತ ಸ್ಥಾನವನ್ನು ಅಲಂಕರಿಸುತ್ತಿರುವುದಕ್ಕೆ ಗ್ರಾಮದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ರಾಜು ಅವರಿಗೆ ಜಯಘೋಷ ಕೂಗಿ, ನಮ್ಮೂರಿನ ಹುಡುಗ ಮತ್ತಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಹಾರೈಸಿದ್ದಾರೆ.
ಇದನ್ನೂ ಓದಿ :- ಸರ್ಕಾರಕ್ಕೆ ನೀಡಿದ್ದ ಗಡುವು ಮುಕ್ತಾಯ – ಆಜಾನ್ ವಿರುದ್ಧ ಹನುಮಾನ್ ಚಾಲೀಸಾ ಪಠಿಸಲು ಹಿಂದೂಪರ ಸಂಘಟನೆಗಳ ನಿರ್ಧಾರ