ಗಾಂಧಿ ಕುಟುಂಬದ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿರುವ ಕಪಿಲ್ ಸಿಬಲ್ ವಿರುದ್ಧ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಕಪಿಲ್ ಸಿಬಲ್ ಉತ್ತಮ ವಕೀಲರಾಗಿರಬಹುದು. ಆದರೆ ಅವರು ಕಾಂಗ್ರೆಸ್ ಪಕ್ಷದ ಉತ್ತಮ ನಾಯಕರಲ್ಲ ಎಂದು ಕಿಡಿ ಕಾರಿದ್ದಾರೆ.
ಕಪಿಲ್ ಸಿಬಲ್ ಕಾಂಗ್ರೆಸ್‌ಗಾಗಿ ಕೆಲಸ ಮಾಡಲು ಯಾವುದೇ ಹಳ್ಳಿಗೆ ಹೋಗಿಲ್ಲ. ಇದೀಗ ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ಪಕ್ಷವನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಸೋನಿಯಾ ಗಾಂಧಿಯನ್ನಾಗಲಿ ಅಥವಾ ಕಾಂಗ್ರೆಸ್ ಪಕ್ಷವನ್ನಾಗಲಿ ದುರ್ಬಲಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
0 71 Less than a minute