ರಾಮನಗರ : ರಾಜ್ಯ ಸರ್ಕಾರ ಕರ್ಫ್ಯೂ, ಲಾಕ್ ಡೌನ್ ಜಾರಿ ಮಾಡಿರುವುದು ಸರಿಯಲ್ಲ ಎಂದು ಸರ್ಕಾರದ ವಿರುದ್ಧ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಮನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ ಮೊದಲು ರಾಜ್ಯದ ಆಸ್ಪತ್ರೆಗಳನ್ನ ಸುಧಾರಣೆ ಮಾಡಲಿ, ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳನ್ನು ಸುಧಾರಿಸಲಿ, ಅದನ್ನ ಬಿಟ್ಟು ಇಲ್ಲದ ಕಾನೂನುಗಳನ್ನು ಜಾರಿ ಮಾಡುವುದು ಸರಿಯಲ್ಲ ಎಂದು ಕಿಡಿಕಾರಿದರು.
ರಾಜ್ಯ ಸರ್ಕಾರ ತಂದಿರುವ ಈ ಕಾನೂನಿಂದ ಸಾಮಾನ್ಯ ಜನರಿಗೆ ತೊಂದರೆಯಾಗುತ್ತಿದೆ. ಹಾಗಾಗಿ ಮೊದಲು ಆಸ್ಪತ್ರೆಗಳನ್ನು ಸರಿಪಡಿಸಲಿ ಎಂದು ರಾಜ್ಯ ಸರ್ಕಾರಕ್ಕೆ ವಾಟಾಳ್ ನಾಗರಾಜ್ ತಾಕೀತು ಮಾಡಿದರು.