ಚಂದನವನದ ಯಶಸ್ವಿ ನಟ, ನಿರ್ದೇಶಕ ರಿಷಬ್ ಶೆಟ್ಟಿ ( rishab sheety ) ಮತ್ತೊಮ್ಮೆ ಗೆಲುವಿನ ನಗೆ ಬೀರಿದ್ದಾರೆ. ಅವರು ನಟಿಸಿ, ನಿರ್ದೇಶನ ಮಾಡಿರುವ ‘ಕಾಂತರ’ ( kanthara ) ಸಿನಿಮಾ ಸೂಪರ್ ಹಿಟ್ ಆಗಿದೆ.
ಈ ಚಿತ್ರ ಬಹುತೇಕ ಕಡೆಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಕರಾವಳಿ ನೆಲದ ಸಂಸ್ಕೃತಿ, ಸಂಪ್ರದಾಯಗಳ ಹಿನ್ನೆಲೆಯಲ್ಲಿ ಮೂಡಿಬಂದಿರುವ ಈ ಚಿತ್ರಕ್ಕೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ‘ಕಾಂತಾರ’ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಮಾಡಿರುವ ಪಾತ್ರ ಎಲ್ಲರನ್ನೂ ಸೆಳೆಯುತ್ತಿದೆ. ಸತತ 6ನೇ ದಿನವೂ ಈ ಸಿನಿಮಾ ಹೌಸ್ಫುಲ್ ಪ್ರದರ್ಶನ ಕಾಣುತ್ತಿರುವುದು ಸಂತಸದ ವಿಷಯ. ಹೊಂಬಾಳೆ ಫಿಲ್ಮ್ಸ್ ಸಂಸ್ಥೆಗೆ ಈ ಚಿತ್ರದಿಂದ ಭರ್ಜರಿ ಲಾಭ ಆಗುತ್ತಿದೆ. ಇದನ್ನೂ ಓದಿ :- ಚಾಮುಂಡಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿದ ಸಿಎಂ ಬೊಮ್ಮಾಯಿ
ಮೊದಲ ದಿನ ‘ಕಾಂತಾರ’ ಸಿನಿಮಾ ನೋಡಿದ ಪ್ರೇಕ್ಷಕರಿಂದ ಪಾಸಿಟಿವ್ ಪ್ರತಿಕ್ರಿಯೆ ವ್ಯಕ್ತವಾಯ್ತು. ರಿಷಬ್ ಶೆಟ್ಟಿ ಅವರ ನಟನೆಯನ್ನು ಎಲ್ಲರೂ ಕೊಂಡಾಡಿದರು. ರಕ್ಷಿತ್ ಶೆಟ್ಟಿ, ರಮ್ಯಾ, ಪ್ರಭಾಸ್ ಮುಂತಾದ ಸ್ಟಾರ್ ಕಲಾವಿದರು ಭೇಷ್ ಎಂದರು. ಎಲ್ಲದರ ಪರಿಣಾಮವಾಗಿ ‘ಕಾಂತಾರ’ ಚಿತ್ರಕ್ಕೆ ಉತ್ತಮ ಹೈಪ್ ಸಿಕ್ಕಿತ್ತು. ಮುಖ್ಯವಾಗಿ ಫ್ಯಾಮಿಲಿ ಪ್ರೇಕ್ಷಕರನ್ನು ಈ ಚಿತ್ರ ಆಕರ್ಷಿಸುತ್ತಿದೆ.
ಇದನ್ನೂ ಓದಿ :- ಹೀರೋಯಿನ್ ಆಗಿ ಮತ್ತೆ ರಮ್ಯಾ ಎಂಟ್ರಿ..! ಸ್ವಾತಿ ಮುತ್ತಿನ ಮಳೆ ಹನಿಯೇ ಟೈಟಲ್ ಘೋಷಣೆ