ತಕ್ತೆ ಚಂಡಮಾರುತದ ಪರಿಣಾಮ ಕರಾವಳಿ ಮತ್ತು ಮಲೆನಾಡು ಸೇರಿದಂತೆ 7 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಚಂಡಮಾರುತ ಅಪ್ಪಳಿಸಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮೇ 18 ರವರೆಗೆ ಭಾರೀ ಮಳೆ ಆಗುವ ಸಾಧ್ಯತೆ ಇದೆ. ಬೆಂಗಳೂರಲ್ಲಿ ಕೂಡ 2 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.