ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 5041 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, 115 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಅಬ್ಬರ ಸತತವಾಗಿ ಇಳಿಮುಖವಾಗುತ್ತಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ. ಸುಧಾಕರ್ ಮಂಗಳವಾರ ಟ್ವಿಟರ್ ನಲ್ಲಿ ಈ ವಿಷಯ ಹಂಚಿಕೊಂಡಿದ್ದು, ಬೆಂಗಳೂರಿಲ್ಲಿ 1000 ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ರಾಜ್ಯದಲ್ಲಿ ಸುಮಾರು 2 ತಿಂಗಳ ನಂತರ ನಗರದಲ್ಲಿ 1000ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಸೋಂಕು ಪ್ರಕರಣಗಳು ಪತ್ತೆಯಾಗಿವೆ.
ರಾಜ್ಯದಲ್ಲಿ ಪಾಸಿಟಿವಿಟಿ ಪ್ರಮಾಣ ಶೇ.3.86ಕ್ಕೆ ಕುಸಿದಿದ್ದು, ರಾಜ್ಯದಲ್ಲಿ 1.32 ಲಕ್ಷ ಜನರಿಗೆ ಕೊರೊನಾ ಪರೀಕ್ಷೆ ಮಾಡಿಸಲಾಗಿದೆ ಎಂದು ಸುಧಾಕರ್ ತಿಳಿಸಿದ್ದಾರೆ.