ಕರ್ನಾಟಕವನ್ನು ಸ್ಟಾರ್ಟ್​​ ಅಪ್​​ ಹಬ್ ಮಾಡುವ ಗುರಿಯಿದೆ: ಸಚಿವ ಬಿ.ಸಿ.ಪಾಟೀಲ್

ಬೆಂಗಳೂರು: ಕರ್ನಾಟಕವನ್ನು ಅಗ್ರಿ ಸ್ಟಾರ್ಟ್​​ ಅಪ್​​ ಮಾಡುವ ಗುರಿಯಿದೆ ಎಂದು ಕೃಷಿ ಸಚಿವ ಬಿ ಸಿ ಪಾಟೀಲ್ ಹೇಳಿದ್ದಾರೆ. ಎಫ್ ಐ ಸಿಸಿ ಶೃಂಗಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜಧಾನಿ ಬೆಂಗಳೂರು ಸ್ಟಾರ್ಟ್​​ ಅಪ್​​ ಎಂದೇ ಪ್ರಖ್ಯಾತಿ ಹೊಂದಿದೆ. 6000 ಸ್ಟಾರ್ಟ್​​ ಅಪ್​​ ಗಳಿದ್ದರೂ ಸಹ ಬಹಳ ಕಡಿಮೆ ಸಂಖ್ಯೆಯಲ್ಲಿ ಸ್ಟಾರ್ಟ್​​ ಅಪ್​​ ಗಳಿವೆ. ಕೃಷಿಗೆ ಮತ್ತು ಕೃಷಿಕರಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಹೆಚ್ಚಿನ ಸಂಖ್ಯೆಯ ಅಗ್ರಿ ಸ್ಟಾರ್ಟ್​​ ಅಪ್​​ ಗಳನ್ನು ಸ್ಥಾಪಿಸಿಸುವ ಗುರಿ ಇದೆ.

ಸ್ಟಾರ್ಟ್​​ ಅಪ್​​ ಗಳು ಕೃಷಿಯಲ್ಲಿ ಸರಪಳಿಯಂತೆ ಕೆಲಸ ಮಾಡುತ್ತಿದ್ದು, ಇದರಿಂದ ರೈತ ಹಾಗೂ ಗ್ರಾಹಕರಿಗೆ ತಂತ್ರಜ್ಞಾನ ಸೇವೆಗಳು ಲಭ್ಯವಾಗಲಿದೆ. ಬೆಂಗಳೂರನ್ನು ಸ್ಟಾರ್ಟ್​​ ಅಪ್​​ ಗಳ ಕೇಂದ್ರವಾಗಿ ಪರಿಗಣಿಸಿ ಮತ್ತು ಕರ್ನಾಟಕದಲ್ಲಿ ಅಗ್ರಿ ಸ್ಟಾರ್ಟ್ ಅಪ್​ ಗಳಿಗೆ ಅನುಕೂಲಕರ ಪರಿಸರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು, ಕೃಷಿ ಇಲಾಖೆಯಿಂದ ಬೆಂಗಳೂರಿನಲ್ಲಿ ಅಗ್ರಿ ಸ್ಟಾರ್ಟ್ ಅಪ್ ಗಳ ಕುರಿತು ಕಾರ್ಯಾಗಾರ ನಡೆಸಲಾಗಿತ್ತು. ಸರ್ಕಾರದ ನೀತಿ ಹಾಗೂ ಪರಿವರ್ತನೆಯ ಬದಲಾವಣೆಗೆ ತಕ್ಕಂತೆ ಉದ್ಯಮಗಳು ಬದಲಾಗುತ್ತಿದ್ದು, ಈ ನಿಟ್ಟಿನಲ್ಲಿ ಕೃಷಿಯನ್ನು ಕೃಷಿ ಉದ್ಯಮವನ್ನು ವೃದ್ಧಿಸಬೇಕಿದೆ. ಇತರೆ ಸ್ಟಾರ್ಟ್​​ ಅಪ್​​ ಗಳ ಮಾದರಿಯಲ್ಲಿಯೇ ಕೃಷಿ ನವೋದ್ಯಮವನ್ನು ಸಹ ಹೆಚ್ಚಿಸಬೇಕಿದೆ ಎಂದರು.

ಭಾರತೀಯ ಕೃಷಿಯಲ್ಲಿ ಸುಸ್ಥಿರ ಮತ್ತು ನವೀನತೆ ಕಲ್ಪಿಸಲು ಎಫ್ಐಸಿಸಿಐ ವಿವಿಧ ವಿಭಾಗಗಳಿಂದ ಕೃಷಿ ಸ್ಟಾರ್ಟ್​​ ಅಪ್​​ಳನ್ನು ಆಯ್ಕೆ ಮಾಡಿಕೊಂಡಿರುವುದು ಶ್ಲಾಘನೀಯ. ಎಫ್.ಐ.ಸಿ.ಸಿ. ಕರ್ನಾಟಕ ರಾಜ್ಯ ಕೌನ್ಸಿಲ್ ಮುಖ್ಯಸ್ಥರೊಂದಿಗೆ ಇತ್ತೀಚೆಗೆ ಕರ್ನಾಟಕದಲ್ಲಿ ಅಗ್ರಿ ಸ್ಟಾರ್ಟ್ ಅಪ್ ಗಳನ್ನು ಉತ್ತೇಜಿಸುವ ಸಂಬಂಧ ಚರ್ಚಿಸಲಾಗಿದೆ. ಅದರಂತೆ ಕರ್ನಾಟಕದಲ್ಲಿ ಸೂಕ್ತವಾದ ಕೃಷಿ ಪರಿಸರ ವ್ಯವಸ್ಥೆ ಮತ್ತು ಅಗ್ರಿ ಸ್ಟಾರ್ಟ್ ಅಪ್ ಗಳನ್ನು ಅಭಿವೃದ್ಧಿಪಡಿಸುವಲ್ಲಿ ಸ್ಟಾರ್ಟ್​​ ಅಪ್​​ಗಳ ವೃದ್ಧಿಗೆ ಸರ್ಕಾರದ ಜೊತೆಗೆ ಎಲ್ಲಾ ರೀತಿಯಲ್ಲಿ ಸಹಕಾರ ನೀಡಲು ಬದ್ಧನಾಗಿರುವುದಾಗಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!