ಸಚಿವ ಕೆಎಸ್ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದ್ದರಿಂದ ವಿಧಾನಸಭೆ ಕಲಾಪವನ್ನು ಮಧ್ಯಾಹ್ನ 3 ಗಂಟೆಯವರೆಗೂ ಮುಂದೂಡಲಾಗಿದೆ.
ಗುರುವಾರ ಕಲಾಪ ಆರಂಭವಾಗುತ್ತಿದ್ದಂತೆ ಬಾವಿಗಿಳಿದ ಕಾಂಗ್ರೆಸ್ ಸದಸ್ಯರು ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಈಶ್ವರಪ್ಪ ಅವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಕಾಂಗ್ರೆಸ್ ಪ್ರತಿಭಟನೆ ನಡುವೆಯೂ ಕಲಾಪ ನಡೆಸಲು ಯತ್ನಿಸಿದರಾದರೂ ಕಾಂಗ್ರೆಸ್ ಸದಸ್ಯರ ಮನವೊಲಿಕೆಗೆ ವಿಫಲರಾಗಿದ್ದರಿಂದ ಕೆಲವು ನಿಮಿಷಗಳಲ್ಲಿಯೇ ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಿ ಹೊರನಡೆದರು.