ಬೆಳಗಾವಿ: ವಿಧಾನಸಭಾ ಉಪಸಭಾಪತಿ, ಸವದತ್ತಿ ಕ್ಷೇತ್ರದ ಶಾಸಕ ಆನಂದ ಮಾಮನಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಇಂದು ಬೆಳಿಗ್ಗೆ ಕೋವಿಡ್ ಟೆಸ್ಟ್ ಮಾಡಿಸಿದ್ದು, ಕೊರೊನಾ ಪಾಸಿಟಿವ್ ಬಂದಿದೆ. ಹಾಗಾಗಿ ವೈದ್ಯರು 17 ದಿನ ಹೋಮ್ ಐಸೋಲೇಷನ್ ನಲ್ಲಿರಲು ಸೂಚಿಸಿದ್ದಾರೆ. ನನ್ನ ಸಂಪರ್ಕಕ್ಕೆ ಬಂದವರು ತಮ್ಮ ಆರೋಗ್ಯದ ಕಡೆ ನಿಗಾ ವಹಿಸಿ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ
ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಬೆಳಗಾವಿ ಲೋಕಸಭಾ ಉಪ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಕಳೆದ ಎರಡು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಸಿಎಂ ಯಡಿಯೂರಪ್ಪನವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ಅವರು ವೈದ್ಯರ ಸಲಹೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.