ಬೆಂಗಳೂರು: ಕೋವಿಡ್ ಎರಡನೇ ಅಲೆ ಕಾರಣಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮುಂದೂಡಿದ ಹಿನ್ನೆಲೆಯಲ್ಲಿ 2021ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಯನ್ನೂ ಮುಂದೂಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರು ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ಹೊಸ ವೇಳಾಪಟ್ಟಿಯಂತೆ ಮುಂಬರುವ ಆಗಸ್ಟ್ 28 ಹಾಗೂ 29ರಂದು ಸಿಇಟಿ ನಡೆಯಲಿದೆ. ಹಾಗೆಯೇ, 30ರಂದು ಕನ್ನಡ ಭಾಷಾ ಪರೀಕ್ಷೆ ಇರುತ್ತದೆ. ಶೀಘ್ರದಲ್ಲಿಯೇ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗುವುದು ಎಂದು ಡಿಸಿಎಂ ಮಾಹಿತಿ ನೀಡಿದ್ದಾರೆ.
ಈ ಮೊದಲು ಪ್ರಕಟಿಸಲಾಗಿದ್ದ ವೇಳಾಪಟ್ಟಿಯಂತೆ ಜುಲೈ 7 ಹಾಗೂ 8 ರಂದು ಸಿಇಟಿ ಹಾಗೂ 9ರಂದು ಕನ್ನಡ ಪರೀಕ್ಷೆ ನಡೆಯಬೇಕಾಗಿತ್ತು.
ಹೆಚ್ಚಿನ ವಿವರಗಳಿಗೆ https://cetonline.karnataka.gov.in/kea/ ವೆಬ್ ತಾಣಕ್ಕೆ ಭೇಟಿ ನೀಡಬಹುದು. ವಿದ್ಯಾರ್ಥಿಗಳು ಕೋವಿಡ್‌ನಿಂದ ಸುರಕ್ಷಿತವಾಗಿರಿ ಮತ್ತೂ ಪಿಯುಸಿ ಮತ್ತು ಸಿಇಟಿ ಪರೀಕ್ಷೆಗೆ ಉತ್ತಮ ಸಿದ್ಧತೆ ಮಾಡಿಕೊಳ್ಳಿ ಎಂದು ಡಿಸಿಎಂ ಅಶ್ವತ್ಥನಾರಾಯಣ ತಿಳಿಸಿದ್ದಾರೆ.