ಜಿಮ್ ಮಾಲೀಕರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶೇ.50ರಷ್ಟು ಭರ್ತಿಗೆ ಅವಕಾಶ ನೀಡಿದ್ದಾರೆ. ಆದರೆ ಕೊರೊನಾ ಮಾರ್ಗಸೂಚಿ ಮೀರಿದರೆ ಬೀಗ ಜಡಿಯುವುದಾಗಿ ಎಚ್ಚರಿಕೆಯನ್ನೂ ನೀಡಿದ್ದಾರೆ.
ಭಾನುವಾರ ಜಿಮ್ ಮಾಲೀಕರ ಜೊತೆ ಮಾತುಕತೆ ನಡೆಸಿದ ನಂತರ ಜಿಮ್ ಗಳಿಗೆ ನೀಡಲಾಗಿದ್ದ ಮಾರ್ಗಸೂಚಿಯಲ್ಲಿ ಬದಲಾವಣೆ ಮಾಡಿ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಯಿತು.
ಕೊರೊನಾ ಎರಡನೇ ಅಲೆ ಅಬ್ಬರದ ಹಿನ್ನೆಲೆಯಲ್ಲಿ ಜಿಮ್ ಗಳನ್ನು ಸಂಪೂರ್ಣವಾಗಿ ಮುಚ್ಚಲು ಆದೇಶ ನೀಡಿದ್ದ ರಾಜ್ಯ ಸರಕಾರ ಇದೀಗ ಶೇ.50ರಷ್ಟು ತೆರೆಯಲು ಅವಕಾಶ ನೀಡಿದೆ.
ಜೀಮ್ ಗಳಲ್ಲಿ ಕೊರೊನಾ ಮಾರ್ಗಸೂಚಿ ಕಡ್ಡಾಯವಾಗಿ ಅನುಸರಿಸಬೇಕು. ಉಪಕರಣಗಳಿಗೆ ಸ್ಯಾನಿಟೈಸರ್ ಕಡ್ಡಾಯವಾಗಿ ಬಳಸಬೇಕು. ಜಿಮ್ ಗಳಲ್ಲಿ ಶೇ 50 ಜನ ಬರಲು ಅವಕಾಶ ನೀಡಬೇಕು. ಕೋವಿಡ್ ನಿಯಮ ಉಲ್ಲಂಘಿಸಿದ್ರೆ ಜೀಮ್ ಗೆ ಬೀಗ ಹಾಕಲಾಗುವುದು ಎಂದು ಎಚ್ಚರಿಸಲಾಗಿದೆ.