ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಒಟ್ಟು 6150 ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ರಾಜಧಾನಿ ಬೆಂಗಳೂರಿನಲ್ಲಿ 4266 ಪ್ರಕರಣಗಳು ದೃಢವಾಗಿವೆ.
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 39 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,69,61ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 4266 ಹೊಸ ಪ್ರಕರಣ ಪತ್ತೆಯಾಗಿದ್ದು, 2417 ಸೋಂಕಿತರು ಗುಣಮುಖಿತರಾಗಿದ್ದಾರೆ. 26 ಮಂದಿ ಕೊರೊನಾಗೆ ಬಲಿಯಾಗಿದ್ದು ಸಕ್ರಿಯ ಪ್ರಕರಣಗಳ ಸಂಖ್ಯೆ 32,605ಕ್ಕೆ ತಲುಪಿದೆ. ರಾಜ್ಯದಲ್ಲಿ ಕೋವಡ್ ಸೋಂಕುಗಳು ದಿನೇ ದಿನೇ ಹೆಚ್ಚುತ್ತಿರುವುದರಿಂದ ಆತಂಕ ಸೃಷ್ಟಿಯಾಗಿದೆ.