ರಾಜ್ಯಕ್ಕೆ ಈ ತಿಂಗಳು ಲಸಿಕೆ ಬರಲಿದ್ದು, ಹೆಚ್ಚಿನ ಲಸಿಕೆ ಬೇಡಿಕೆ ಇಟ್ಟು ಹೆಚ್ಚಿನ ಲಸಿಕೆ ಪಡೆಯುತ್ತೇವೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಬಗ್ಗೆ ಚರ್ಚಿಸಲು ದೆಹಲಿಗೆ ತೆರಳಲಿದ್ದೇನೆ ಎಂದರು.
ಎಸ್ ಎಸ್ ಎಲ್ ಸಿ ಪರೀಕ್ಷೆ ವಿಚಾರವಾಗಿ ಸಿಎಂ ಜೊತೆ ಮಾತನಾಡಿದ್ದೆ ಅಂತ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ತಿಳಿಸಿ. ನಾನು ನಿನ್ನೆ ನಮ್ಮ ಇಲಾಖೆಯ ಸಭೆಯಲ್ಲಿದ್ದೆ. ಸಭೆ ಆದ ಮೇಲೆ ಅವರು ಹೇಳಿದ್ದಾರೆ. ಪರೀಕ್ಷೆ ಬಗ್ಗೆ ತಜ್ಞರು ಮತ್ತು ಮಂತ್ರಿಗಳು ಮಾತನಾಡಿದ್ದಾರೆ ಎಂದು ಅವರು ಹೇಳಿದರು.