ಬೆಂಗಳೂರು : ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಏಕಾಏಕಿ ಮಾರ್ಗಸೂಚಿ ಬದಲಾವಣೆ ಮಾಡಿದೆ. ರಾಜ್ಯಾದ್ಯಂತ ಹೊಸ ನಿಯಮಗಳು ಜಾರಿಗೆ ಬಂದಿವೆ. ಈ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿ ಕುಮಾರ್ ಪರಿಷ್ಕೃತ ಮಾರ್ಗಸೂಚಿಯನ್ನು ಹೊರಡಿಸಿದ್ದಾರೆ.
ಹೊಸ ಮಾರ್ಗಸೂಚಿಯಂತೆ ಮೇ 4ರವರೆಗೆ ರಾಜ್ಯಾದ್ಯಂತ ಅಗತ್ಯ ಸೇವೆಗಳು ಹೊರತುಪಡಿಸಿ ಎಲ್ಲಾ ಶಾಪ್ ಗಳು ಬಂದ್ ಆಗಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪೊಲೀಸರು, ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸುತ್ತಿದ್ದಾರೆ. ಅಲ್ಲದೇ ನಿಯಮ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ ನೀಡುತ್ತಿದ್ದಾರೆ.
ಮಠ, ಮಂದಿರ, ಮಸೀದಿ, ಚರ್ಚ್ ಗಳಿಗೆ ಸಾರ್ವಜನಿಕರ ಪ್ರವೇಶ್ ನಿರ್ಬಂಧಿಸಲಾಗಿದೆ. ಖಾಸಗಿ ಸಂಸ್ಥೆಗಳಲ್ಲಿ ಕೂಡ ಅಗತ್ಯ ಸಿಬ್ಬಂದಿ ಹೊರತುಪಡಿಸಿ ಬೇರೆ ಸಿಬ್ಬಂದಿಗೆ ಅವಕಾಶವಿಲ್ಲ. ಔಷಧ ಅಂಗಡಿ, ದಿನಸಿ, ಹಣ್ಣು-ತರಕಾರಿ, ಸಲೂನ್ ಬ್ಯೂಟಿ ಪಾರ್ಲರ್, ವೈನ್ ಶಾಪ್ ಹೊರತುಪಡಿಸಿ ಉಳಿದೆಲ್ಲ ಅಂಗಡಿ, ಶಾಪಿಂಗ್ ಕಾಂಪ್ಲೆಕ್ಸ್, ಮಾಲ್ ಸೇರಿದಂತೆ ಎಲ್ಲಾ ಸೇವೆಗಳನ್ನು ಬಂದ್ ಮಾಡಲಾಗುತ್ತಿದೆ.
ಇದಲ್ಲದೇ ಅಗತ್ಯ ಸೇವೆ ಒದಗಿಸುವಂತ ಸೇವೆಯ ಶಾಪ್ ಗಳು ಹೊರತಾಗಿ, ರಾಜ್ಯಾಧ್ಯಂತ ಇತರೆ ಶಾಪ್ ಗಳನ್ನು ಬಂದ್ ಮಾಡುವಂತೆ ಇದೀಗ ನೂತನ ಮಾರ್ಗಸೂಚಿ ಆದೇಶದಲ್ಲಿ ತಿಳಿಸಲಾಗಿದೆ. ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಹಿನ್ನೆಲೆ ಪೊಲೀಸರು ಅಂಗಡಿ, ಮಾರ್ಕೆಟ್ ವ್ಯಾಪಾರವನ್ನ ಬಂದ್ ಮಾಡಿಸುತ್ತಿದ್ದಾರೆ.