ಕೊರೊನಾ ಮೂರನೇ ಅಲೆ ಭೀತಿ ನಡುವೆಯೂ ತಜ್ಞರ ಸಲಹೆ ಮೇರೆಗೆ ಗಣೇಶ ಹಬ್ಬದ ನಂತರ ಶಾಲೆ ಆರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
6 ರಿಂದ 8ನೇ ತರಗತಿವರೆಗಿನ ಶಾಲೆಗಳನ್ನು ಆರಂಭಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದ್ದು, 1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಕುರಿತು ಮುಂದಿನ ವಾರ ಮತ್ತೊಂದು ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದು ಉನ್ನತ ಮೂಲಗಳು ತಿಳಿಸಿವೆ.
ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಶಾಲೆ ಆರಂಭಿಸಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.