ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಆಸ್ಪತ್ರೆಗಳಲ್ಲಿನ ಬೆಡ್ ಬ್ಲಾಕಿಂಗ್ ಹಗರಣದ ತನಿಖೆಗೆ ಹೈಕೋರ್ಟ್ ಆದೇಶಿಸಿದೆ.
ರಾಜ್ಯ ಸರಕಾರಕ್ಕೆ ಬುಧವಾರ ನೇರ ಆದೇಶ ನೀಡಿದ ಹೈಕೋರ್ಟ್, ಐಪಿಎಸ್ ಅಧಿಕಾರಿ ನೇತೃತ್ವದಲ್ಲಿ ಸೈಬರ್ ಕ್ರೈಂ ಪೊಲೀಸರು ಸೇರಿದಂತೆ ಪೊಲೀಸ್ ಅಧಿಕಾರಿಗಳ ತಂಡದಿಂದ ತನಿಖೆ ನಡೆಸುವಂತೆ ಸೂಚಿಸಿದೆ.