ಬೆಂಗಳೂರು: ರಾಜ್ಯದಲ್ಲಿ ಮೇ. 24 ರಿಂದ ಮತ್ತೆ 14 ದಿನ ರಾಜ್ಯಾದ್ಯಂತ ಕೊರೊನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ನಿಯಂತ್ರಣಕ್ಕಾಗಿ ಕಠಿಣ ನಿಯಮ ಜಾರಿಗೊಳಿಸಲಾಗುತ್ತದೆ. ನಮ್ಮ ಹಿರಿಯ ಸಚಿವರು ಅಧಿಕಾರಿಗಳೊಂದಿಗೆ ಚರ್ಚಿಸಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಮೇ. 24 ರಿಂದ ಮತ್ತೆ 14 ದಿನ ಲಾಕ್ ಡೌನ್ ವಿಸ್ತರಣೆ ಮಾಡಲಾಗುತ್ತದೆ. ಜೂನ್ 7 ವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ ಎಂದರು.
ಬೆಳಿಗ್ಗೆ 6 ರಿಂದ 9.45 ರವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗುತ್ತಿದೆ. ಬೆಳಿಗ್ಗೆ 9.45 ಆದರೂ ಜನರು ತಿರುಗಾಡುತ್ತಿದ್ದಾರೆ. ಇದಕ್ಕೆ ಇನ್ಮುಂದೆ ಅವಕಾಶ ಇಲ್ಲ. ಪೊಲೀಸರಿಗೆ ಸೂಚಿಸಲಾಗಿದೆ. ಕಠಿಣ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.