ಬೆಂಗಳೂರು : ಕೋವಿಡ್ ಸೋಂಕಿನ ಹಿನ್ನಲೆ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ದ್ವಿತೀಯ ಪಿಯುಸಿ ಮತ್ತು ಪ್ರಥಮ ಪಿಯುಸಿ ಪರೀಕ್ಷೆಗಳನ್ನು ರದ್ದು ಮಾಡುವುದಾಗಿ ಈ ಹಿಂದೆ ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿತ್ತು. ಆದರೆ, ಈಗ ಏಕಾಏಕಿ ವಿದ್ಯಾರ್ಥಿಗಳಿಗೆ ಆನ್ಲೈನ್ ಪರೀಕ್ಷೆ ನಡೆಸುವ ಮೂಲಕ ಶಾಕ್ ನೀಡಿದೆ.
ವಿದ್ಯಾರ್ಥಿಗಳ ತೇರ್ಗಡೆಗೆ ಎರಡು ಪ್ರಶ್ನೆ ಪತ್ರಿಕೆಯ ಪರೀಕ್ಷೆ ನಡೆಸಲು ಪಿಯು ಮಂಡಳಿ ನಿರ್ಧರಿಸಿದೆ. ಪರೀಕ್ಷೆ ಯಾವ ಮಾದರಿ ನಡೆಯಲಿದೆ ಎಂಬುದರ ಕುರಿತು ಪಿಯು ಮಂಡಳಿಯ ವೆಬ್ಸೈಟ್ನಲ್ಲಿ ಮಾದರಿ ಪ್ರಶ್ನೆ ಪತ್ರಿಕೆಯನ್ನು ನೀಡಲಾಗಿದೆ. ಈ ಮೂಲಕ ಶಿಕ್ಷಣ ಸಚಿವರ ಮಾತಿನಿಂದ ಪರೀಕ್ಷೆಯಿಲ್ಲ ಎಂದು ಸಂತಸದಿಂದ ವಿದ್ಯಾರ್ಥಿಗಳಿಗೆ ಪಿಯು ಮಂಡಳಿ ಆಘಾತ ನೀಡಿದೆ.
ರಾಜ್ಯದ ಎಲ್ಲ ಪಿಯು ಕಾಲೇಜುಗಳಿಗೆ ಪಿಯು ಬೋರ್ಡ್ ನಿಂದ ಈಗಾಗಲೇ ಈ ಸುತ್ತೋಲೆ ಹೊರಡಿಸಲಾಗಿದೆ. ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತಯಾರಾಗುವಂತೆ ಸೂಚನೆ ನೀಡಲಾಗಿದೆ.
2 ವಿಷಯಗಳ ಮೂಲಕ ಪರೀಕ್ಷೆ ನಡೆಸಲು ಸೂಚಿಸಿರುವ ಪಿಯು ಮಂಡಳಿಯು, ಆನ್ ಲೈನ್ ಮೂಲಕ ಪರೀಕ್ಷೆ ನಡೆಸಿ, ಅದರ ಆಧಾರದ ಮೇಲೆ ಪ್ರಥಮ ಪಿಯುಸಿ ಫಲಿತಾಂಶ ಪ್ರಕಟಕ್ಕೂ ಸೂಚಿಸಿದೆ. ಈ ಮೂಲಕ ಪರೀಕ್ಷೆ ಇಲ್ಲದೆ ಪಾಸ್ ಎಂದು ನಂಬಿದ್ದ ಪಿಯು ವಿದ್ಯಾರ್ಥಿಗಳು ಇದೀಗ ಆನ್ ಲೈನ್ ಮೂಲಕ ಎರಡು ವಿಷಯಗಳ ಪರೀಕ್ಷೆ ಬರೆಯಬೇಕಿದೆ.