ರಾಜ್ಯದಲ್ಲಿ ಭಾನುವಾರ 4553 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಬೆಂಗಳೂರಿನಲ್ಲಿ 2787 ಪ್ರಕರಣಗಳು ಪತ್ತೆಯಾಗಿವೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭಾನುವಾರ ಬಿಡುಗಡೆ ಮಾಡಿದ ಕಳೆದ 24 ಗಂಟೆಗಳ ಅಂಕಿ ಅಂಶದ ಪ್ರಕಾರ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 10,15,155ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 15 ಮಂದಿ ಸೋಂಕಿಗೆ ಬಲಿಯಾಗಿದ್ದು, ಒಟ್ಟಾರೆ ಸಾವಿನ ಸಂಖ್ಯೆ 12,625ಕ್ಕೆ ಜಿಗಿತ ಕಂಡಿದೆ. 2060 ಮಂದಿ ಸೋಂಕಿನಿಂದ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆದವರ ಸಂಖ್ಯೆ 9,63,419ಕ್ಎಕ ಜಿಗಿತ ಕಂಡಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 39,092ಕ್ಕೆ ತಲುಪಿದೆ.
ಬೆಂಗಳೂರಿನಲ್ಲಿ 2787 ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಂದೇ ದಿನದಲ್ಲಿ 1,225 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 8 ಮಂದಿ ಸೋಂಕಿಗೆ ಬಲಿಯಾಗಿದ್ದು, ಒಟ್ಟಾರೆ ಸಾವಿನ ಸಂಖ್ಯೆ 4649ಕ್ಕೆ ತಲುಪಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 28,098ಕ್ಕೆ ತಲುಪಿದೆ.