ರಾಷ್ಟ್ರಧ್ವಜದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಕೆಎಸ್ ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ಮುಂದುವರಿಸಿದ್ದರಿಂದ ಕಲಾಪ ನಡೆಸಲು ಅಸಹಾಯಕತೆ ವ್ಯಕ್ತಪಡಿಸಿದ ಸ್ಪೀಕರ್ ಕಲಾಪವನ್ನು ಮಾರ್ಚ್ 4ಕ್ಕೆ ಮುಂದೂಡಿದ್ದಾರೆ.
ಮಂಗಳವಾರ ಕಲಾಪ ಆರಂಭಗೊಳ್ಳುತ್ತಿದ್ದಂತೆ ಕಾಂಗ್ರೆಸ್ ಸದಸ್ಯರು ಈಶ್ವರಪ್ಪ ವಜಾಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರಿಂದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕಲಾಪವನ್ನು ಮುಂದೂಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಲಾಪವನ್ನು ಸುಗಮವಾಗಿ ನಡೆಸಲು ನಾನು ವಿಪಕ್ಷದ ಸದಸ್ಯರು ಹಾಗೂ ಸರಕಾರದ ಜೊತೆ ಮಾತುಕತೆ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸದನದಲ್ಲಿ ಗದ್ಧಲದ ನಡುವೆ ನಾಲ್ಕಲು ವಿಧೇಯಕಗಳಿಗೆ ಸರಕಾರ ಅಂಗೀಕಾರ ಪಡೆಯುವಲ್ಲಿ ಯಶಸ್ವಿಯಾಯಿತು.