ತಮಿಳುನಾಡಿಗೆ 30.6 ಟಿಎಂಸಿ ಕಾವೇರಿ ನದಿ ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸೂಚಿಸಿದೆ.
ದೆಹಲಿಯಲ್ಲಿ ಮಂಗಳವಾರ ನಡೆದ ಅಧ್ಯಕ್ಷ ಎಸ್.ಕೆ ಹಲ್ದರ್ ನೇತೃತ್ವದಲ್ಲಿ ನಡೆದ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಕರ್ನಾಟಕಕ್ಕೆ ಸೂಚನೆ ನೀಡಲಾಗಿದೆ.
ಜೂನ್, ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ತಮಿಳುನಾಡಿನ ಪಾಲನ್ನು ಬಾಕಿ ಇರಿಸಿಕೊಂಡ ಹಿನ್ನೆಲೆಯಲ್ಲಿ ಪ್ರಾಧಿಕಾರ ಈ ಸೂಚನೆ ನೀಡಿದೆ.
ರಾಜ್ಯದಲ್ಲಿ ಉತ್ತಮ ಮಳೆ ಆಗುತ್ತಿರುವುದರಿಂದ ಕರ್ನಾಟಕ 30.6 ಟಿಎಂಸಿ ನೀರು ಹರಿಸಿದರೆ ಸಮಸ್ಯೆ ಆಗುವುದಿಲ್ಲ ಎಂದು ಸಭೆಯಲ್ಲಿ ಚರ್ಚೆ ಆಗಿದೆ ಎಂದು ಹೇಳಲಾಗಿದೆ.