ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನಲೆ ಕರ್ನಾಟಕದಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಚಿತ್ರದುರ್ಗ, ಶಿವಮೊಗ್ಗ, ತುಮಕೂರು ಮತ್ತು ದಾವಣಗೆರೆ ಜಿಲ್ಲೆಗಳನ್ನು ಹೊರತು ಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇಂದು ಮತ್ತು ನಾಳೆ ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ, ಮೈಸೂರು, ಹಾಸನ, ಕೊಡಗು, ಮಂಡ್ಯ ಜಿಲ್ಲೆಗಳ ಕೆಲವು ಕಡೆ ಗುಡುಗು ಸಹಿತ ಮಳೆ ಯಾಗುವ ಸಾಧ್ಯತೆ ಇದೆ. ಮಾ.20ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಮಾ. 21ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಉತ್ತರ ಒಳನಾಡಿನ ಕೊಪ್ಪಳ, ರಾಯಚೂರು, ಕಲಬುರಗಿ, ಯಾದಗಿರಿ ಜಿಲ್ಲೆಗಳ ಕೆಲವು ಕಡೆ ಮಾ.20 ಮತ್ತು ಮಾ.21ರಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
0 269 Less than a minute